ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಾಮರಾಜಪೇಟೆಯ ಫೋರ್ಟ್ ಹೈಸ್ಕೂಲ್ನಲ್ಲಿ ‘ರಾಮ ಗಾನ ಆಚಾರ್ಯ’ ಪ್ರಶಸ್ತಿ ಸಮಾರಂಭ ನೆರವೇರಿದ್ದು, ಆರ್ಎಸ್ಎಸ್ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀರಾಮ ಸೇವಾ ಮಂಡಳಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ವಾಲಿಯರ್ ಘರಾನಾ ಖ್ಯಾತ ಗಾಯಕ ವೆಂಕಟೇಶ್ ಕುಮಾರ್ ಅವರಿಗೆ ‘ರಾಮ ಗಾನ ಆಚಾರ್ಯ’ ಪ್ರಶಸ್ತಿ ಪ್ರದಾನ ಮಾಡಲಾಯಿತು.ಖ್ಯಾತ ಲೇಖಕಿ ಸುಧಾಮೂರ್ತಿ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.