ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದಲ್ಲಿ ಇಂದು ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ಆಯೋಜಕರು ಸಮಾವೇಶ ಆರಂಭಕ್ಕೂ ಮುನ್ನ ತಮಿಳು ನಾಡಗೀತೆ ಆಡಿಯೋ ಪ್ಲೇ ಮಾಡಿದ್ದಾರೆ. ಅದನ್ನು ಅರ್ಧಕ್ಕೆ ತಡೆದ ಶಾಸಕ ಕೆ.ಎಸ್. ಈಶ್ವರಪ್ಪ ಕರ್ನಾಟಕ ನಾಡಗೀತೆಯನ್ನು ಹಾಕಿಸಿದ್ದಾರೆ.
ಸಮಾವೇಶದ ಆರಂಭದಲ್ಲಿ ಸಂಘಟಕರು ಈಗ ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆಗೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಗಣ್ಯರು ಎದ್ದು ನಿಂತರು. ನಾಡಗೀತೆ ಪ್ಲೇ ಆಗುತ್ತಿದ್ದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚೆತ್ತುಕೊಂಡಿದ್ದು, ಕೂಡಲೇ ಡಯಾಸ್ ಬಳಿ ತೆರಳಿ ತಮಿಳು ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದ್ದಾರೆ. ಬಳಿಕ ಕನ್ನಡ ನಾಡಗೀತೆ ಹಾಕಿಸಿ ಈಶ್ವರಪ್ಪ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ.
ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ ಉಪಸ್ಥಿತರಿದ್ದರು.