ಹೊಸದಿಗಂತ ಡಿಜಿಟಲ್ ಡೆಸ್ಕ್
ಮಂಗಳೂರಿನ ಕುಲಶೇಖರದ ಶ್ರೀವೀರನಾರಾಯಣ ದೇವಾಲಯದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಅಂಗವಾಗಿ ಚಪ್ಪರ ಮುಹೂರ್ತವು ಇಂದು ಬೆಳಗ್ಗೆ 8.15 ರ ಸುಮುಹೂರ್ತದಲ್ಲಿ ನಡೆಯಿತು.
ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನ ನಡೆಯಿತು .
ಈ ಸಂದರ್ಭ ಕ್ಷೇತ್ರದ ಆಡಳಿತ ಸಮಿತಿ, ಬ್ರಹ್ಮಕಲಶ ಸಮಿತಿ, ಸೇವಾ ಟ್ರಸ್ಟ್, ಜೀರ್ಣೋದ್ದಾರ ಸಮಿತಿ, ಸೇವಾ ಸಮಿತಿ, ಮಹಿಳಾ ಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘ, ವಿವಿಧ ಸಮಿತಿಗಳ ಪ್ರಮುಖರು ಹಾಗೂ ಎಲ್ಲಾ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.