ರಾಜ್ಯ ಚುನಾವಣಾ ಅಖಾಡಕ್ಕೆ ಪ್ರಧಾನಿ ಮೋದಿ: ನಾಳೆ ಬೆಂಗಳೂರಿನಲ್ಲಿ ಅದ್ದೂರಿ ರೋಡ್ ಶೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಚುನಾವಣಾ ಅಖಾಡಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಮಿಸಲಿದ್ದು, ಬೆಂಗಳೂರಿನಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇತ್ತ ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ರಿಂದ ರಾತ್ರಿ 7.30ರ ವರೆಗೆ ಮೋದಿ ರ‍್ಯಾಲಿ ನಡೆಯಲಿದ್ದು, ಈ ಅವಧಿಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಪರ್ಯಾಯ ರಸ್ತೆಗಳ ಬಳಕೆಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದು, ಆ ಕುರಿತು ವಿವರ ನೀಡಿದ್ದಾರೆ.

ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಭ?

ಹಳೆ ಏರ್ಪೋರ್ಟ್ ರಸ್ತೆ , ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ಕೃಂಬಿಗಲ್ ರಸ್ತೆ, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್​ಸನ್ ರಸ್ತೆ, ಲಾಲ್ ಭಾಗ್ ವೆಸ್ಟ್ ಗೇಟ್ ರಸ್ತೆ, ಕೆಆರ್. ಸರ್ಕಲ್, ಆರ್​​ವಿ ಕಾಲೇಜ್ ರಸ್ತೆ, ಲಾಲ್ ಭಾಗ್ ಮುಖ್ಯ ರಸ್ತೆ, ಬಸನವಗುಡಿ 50 ಅಡಿ ಕೆನರಾ ಬ್ಯಾಂಕ್ ರಸ್ತೆ.

ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಸಂಚಾರಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.

ಪರ್ಯಾಯ ಮಾರ್ಗ:

  • ಮಾಗಡಿ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಬರುವ ವಾಹನಗಳು ತಾವರೆಕೆರೆ ಜಂಕ್ಷನ್ ಆಗಿ ಹೆಮ್ಮಿಗೆಪುರ ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ಮಾಗಡಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಸೊಂಡೇಕೊಪ್ಪ ನೆಲಮಂಗಲ ಮೂಲಕ ಸಂಚರಿಸಬಹುದು.
  • ತುಮಕೂರು ಕಡೆಯಿಂದ ಬಂದು ನೈಸ್ ರಸ್ತೆಯಲ್ಲಿ ಸಂಚರಿಸುವ ಸರಕು ವಾಹನಗಳು ನೆಲಮಂಗಲ ಸೊಂಡೇಕೊಪ್ಪ ಬೈಪಾಸ್‌ನಲ್ಲಿ ಬಲತಿರುವು ಪಡೆದು ಸೊಂಡೇಕೊಪ್ಪ ತಾವರೆಕೆರೆ – ಹೆಮ್ಮಿಗೆಪುರ – ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು.
  • ನಗರದ ಒಳಭಾಗದಿಂದ ಮಾಗಡಿ ಕಡೆಗೆ ಸಂಚರಿಸುವ ವಾಹನಗಳು ಎಂಸಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಮೈಸೂರು ರಸ್ತೆ ಕೆಂಗೇರಿ – ಕೊಮ್ಮಘಟ್ಟ – ಹೆಮ್ಮಿಗೆಪುರ – ತಾವರೆಕೆರೆ ಮೂಲಕ ಸಂಚರಿಸಬಹುದು.
  • ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಮೈಸೂರು ರಸ್ತೆಗೆ ಚಲಿಸಿ ಕೆಂಗೇರಿ ಆರ್ ಆರ್ ಕಾಲೇಜು ಮೂಲಕ – ರಾಮೋಹಳ್ಳಿ, ಚಂದ್ರಪ್ಪ ಸರ್ಕಲ್ – ತಾವರೆಕೆರೆ ಮೂಲಕ ಮಾಗಡಿ ರಸ್ತೆ ಮತ್ತ ತುಮಕೂರು ರಸ್ತೆಗೆ ಸಂಚರಿಸಬಹುದು.
  • ಸಿಎಂಟಿಐ ಜಂಕ್ಷನ್‌ನಿಂದ ನಾಯಂಡಹಳ್ಳಿ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಗೊರಗುಂಟೆಪಾಳ್ಯ – ವೆಸ್ಟ್ ಆಫ್ ಕಾರ್ಡ್ ರಸ್ತೆ – ಎಂ.ಸಿ ಸರ್ಕಲ್ – ವಿಜಯನಗರ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು.
  • ಹಳೇ ರಿಂಗ್ ರಸ್ತೆಯಲ್ಲಿ ಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ಉಲ್ಲಾಳ ಜಂಕ್ಷನ್​​ನಲ್ಲಿ ಎಡತಿರುವು ಪಡೆದು ಉಲ್ಲಾಳ ವಿಲೇಜ್, ರಾಮಸಂದ್ರ ಬ್ರಿಡ್ಜ್ ಹೆಮ್ಮಿಗೆಪುರ ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಸಂಚರಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!