ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿ ರೋಚಕ ಹಂತ ತಲುಪಿದ್ದು, ಮೂರನೇ ಪಂದ್ಯಕ್ಕೆ ಧರ್ಮಶಾಲಾ ವೇದಿಕೆಯಾಗುತ್ತಿದೆ. ಎರಡೂ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿರುವುದರಿಂದ ಸರಣಿಯಲ್ಲಿ ಮುನ್ನಡೆ ಸಾಧಿಸಲು ಈ ಪಂದ್ಯ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಈ ಪಂದ್ಯಕ್ಕೆ ಮುನ್ನ ಭಾರತ ತಂಡದಲ್ಲಿ ಬದಲಾವಣೆ ಸಾಧ್ಯತೆ ಬಗ್ಗೆ ಚರ್ಚೆ ಜೋರಾಗಿದೆ. ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಇತ್ತೀಚಿನ ದಿನಗಳಲ್ಲಿ ಉತ್ತಮ ಫಾರ್ಮ್ನಲ್ಲಿದ್ದು, ಮೂರನೇ ಟಿ20ನಲ್ಲಿ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಇದರಿಂದ ಉಪನಾಯಕ ಶುಭ್ಮನ್ ಗಿಲ್ ಅಥವಾ ಜಿತೇಶ್ ಶರ್ಮಾ ಅವರ ಸ್ಥಾನಕ್ಕೆ ಸವಾಲು ಎದುರಾಗಬಹುದು.
ಇತ್ತ ದಕ್ಷಿಣ ಆಫ್ರಿಕಾ ತಂಡವೂ ಒಂದು ಬದಲಾವಣೆಯ ಚರ್ಚೆ ನಡೆಯುತ್ತಿದೆ. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ನಲ್ಲಿ ಮಿಂಚಿದ ತಂಡದಲ್ಲಿ ರೀಜಾ ಹೆಂಡ್ರಿಕ್ಸ್ ಮಾತ್ರ ಗಮನಸೆಳೆಯಲು ವಿಫಲರಾಗಿದ್ದರು. ಅವರ ಬದಲಿಗೆ ಯುವ ಆಟಗಾರ ರಿಯಾನ್ ರಿಕಲ್ಟನ್ಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್ಸ್ಟಾರ್ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಸರಣಿಯ ದಿಕ್ಕು ನಿರ್ಧರಿಸುವ ಈ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

