ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ನೈಸ್ ರೋಡ್ ಜಂಕ್ಷನ್ ನಿಂದ ಸುಮನಹಳ್ಳಿವರೆಗೆ 5.3 ಕಿಮೀ ರೋಡ್ ಶೋ ನಡೆಸುತ್ತಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೈ ಮೋದಿ ಘೋಷಣೆ ಮೊಳಗಿದ್ದು, ಸಾವಿರಾರು ಕಾರ್ಯಕರ್ತರು ಜೈ ಮೋದಿ ಘೋಷಣೆ ಕೂಗಿ ಹೂವಿನ ಸುರಿಮಳೆ ಸುರಿಸುತ್ತಿದ್ದಾರೆ.
ರೋಡ್ ಶೋ ಮಾರ್ಗದಲ್ಲಿ ಜನರು ಕಿಕ್ಕಿರಿದು ಸೇರಿದ್ದು, ಮೋದಿ ಮೋದಿ ಎಂದು ಜೈಕಾರ ಹಾಕಿ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿ ಮೋದಿ ಎಂದು ಕೂಗಿದ ಅಭಿಮಾನಿಗಳು ಪ್ರಧಾನಿ ಮೋದಿ ಮೇಲೆ ಹೂಮಳೆ ಸುರಿಸಿದ್ದಾರೆ.
https://twitter.com/BJP4India?ref_src=twsrc%5Egoogle%7Ctwcamp%5Eserp%7Ctwgr%5Eauthor