ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿ ಆರಂಭಗೊಂಡು ಇಂದು 1,000ನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
2008ರಲ್ಲಿ ಆರಂಭಗೊಂಡ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಟ್ರೋಫಿ ಗೆದ್ದುಕೊಂಡಿತ್ತು. ಇದೀಗ 1000 ಪಂದ್ಯದಲ್ಲಿ ರಾಜಸ್ಥಾನ ಟಾಸ್ ಗೆದ್ದುಕೊಂಡಿದೆ.
ರಾಜಸ್ಥಾನ ರಾಯಲ್ಸ್
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ಶಿಮ್ರೊನ್ ಹೆಟ್ಮೆಯರ್, ಆರ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೋಲ್ಟ್, ಸಂದೀಪ್ ಶರ್ಮಾ, ಯುಜುವೇಂದ್ರ ಚಹಾಲ್
ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೇಯಾ, ರಿಲೆ ಮೆರೆಡಿತ್, ಅರ್ಶದ್ ಖಾನ್