ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಗೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಈ ನುಡವೆ ಎಲ್ಲೆಡೆ ಪ್ರಚಾರಗಳ ಕೂಡ ಸಾಗಿದೆ. ರಾಜ್ಯದಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ನಡೆಸಿರುವ ಗೃಹ ಸಚಿವ ಅಮಿತ್ ಶಾ, ಇಂದು ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಪ್ಪನಾಯಕ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, ನೆಹರು ರಸ್ತೆ, ದುರ್ಗಿ ಗುಡಿ, ಜೈಲ್ ರಸ್ತೆ ಮತ್ತು ಲಕ್ಷ್ಮೀ ಟಾಕೀಸ್ವರೆಗೂ ರೋಡ್ಶೋ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯಿಂ ಸಂಜೆ 7:30ರ ವರೆಗೆ ಈ ರಸ್ತೆಗಳಲ್ಲಿ ಯಾವುದೇ ವಾಹನಗಳ ನಿಲುಗಡೆಗೆ ಅವಕಾವಿರುವುದಿಲ್ಲ. ಬದಲಿ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಸಾರ್ವಜನಿಕರಿಗೆ ಕೋರಲಾಗಿದೆ. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಪರ ಪ್ರಚಾರ ಮಾಡಲಿದ್ದಾರೆ.