ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಸ್ಯಾಂಡಲ್ವುಡ್ ನಟರೂ ಕೈ ಜೋಡಿಸಿದ್ದು, ಇಂದು ನಟ ಕಿಚ್ಚ ಸುದೀಪ್ ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಕಿತ್ತೂರು, ಬೆಳಗಾವಿ ಗ್ರಾಮೀಣ, ಯಮಕನಕರಡಿ ಕ್ಷೇತ್ರದಲ್ಲಿ ಕಿಚ್ಚ ಸುದೀಪ್ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ.
ನಟ ಸುದೀಪ್ ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ ಹೀಗಿದೆ :
- ನಟ ಸುದೀಪ್ ಇಂದು ಬೆಳಗ್ಗೆ 10.40ಕ್ಕೆ ವಿಶೇಷ ವಿಮಾನ ಮೂಲಕ ಬೆಂಗಳೂರಿಂದ ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ.
- 11.20ಕ್ಕೆ ಕಿತ್ತೂರು ಕ್ಷೇತ್ರದ ನೇಸರಗಿಯಲ್ಲಿ ಸುದೀಪ್ ರೋಡ್ ಶೋ ನಲ್ಲಿ ಭಾಗಿ
- ನೇಸರಗಿಯಲ್ಲಿ ಬೆಳಗ್ಗೆ 11.20ರಿಂದ ಮಧ್ಯಾಹ್ನ 2.30ರವರೆಗೆ ಸುದೀಪ್ ರೋಡ್ ಶೋ ನಡೆಸಿ ಕಿತ್ತೂರು
- ಬಿಜೆಪಿ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ ಪರ ಮತಯಾಚಿಸಲಿದ್ದಾರೆ.
- ಮಧ್ಯಾಹ್ನ 1ಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿಗೆ ಆಗಮಿಸಲಿದ್ದಾರೆ.
- ಮಧ್ಯಾಹ್ನ 1 ಗಂಟೆಯಿಂದ 1.50ರವರೆಗೆ ಸುಳೇಭಾವಿ ಗ್ರಾಮದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಳಕರ್ ಪರ ಪ್ರಚಾರ ಮಾಡುವ ಮೂಲಕ ಮತಯಾಚಿಸಲಿದ್ದಾರೆ.
- ಮಧ್ಯಾಹ್ನ 2.15ಕ್ಕೆ ಬೆಳಗಾವಿಯ ಖಾಸಗಿ ಹೋಟೆಲ್ಗೆ ಆಗಮನ
- ಸಂಜೆ 4ಕ್ಕೆ ಯಮಕನಮರಡಿಗೆ ತೆರಳಲಿದ್ದಾರೆ ನಟ ಸುದೀಪ್
- ಸಂಜೆ 4 ರಿಂದ 5ರವರೆಗೆ ಯಮಕನಮರಡಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹುಂದ್ರಿ ಪರ ಮತಬೇಟೆ ನಡೆಸಲಿದ್ದಾರೆ.
- ಸಂಜೆ 5.30ಕ್ಕೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ.
- ಸಂಜೆ 5.30ರಿಂದ 6.30ರವರೆಗೆ ಬೆಳಗಾವಿ ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಳಗಾವಿ ಉತ್ತರ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ್ ಪರ ಪ್ರಚಾರ ಕೈಗೊಳ್ಳಲಿದ್ದಾರೆ.
- ಸಂಜೆ 6.40ಕ್ಕೆ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಅಭಯ್ ಪಾಟೀಲ್ ಪರ ಮತಯಾಚನೆ
- ಸಂಜೆ 7.40ಕ್ಕೆ ಬೆಳಗಾವಿಯ ಖಾಸಗಿ ಹೋಟೆಲ್ಗೆ ಆಗಮನ, ಇಂದು ರಾತ್ರಿ ಬೆಳಗಾವಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.