ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಇರುವಂತೆ ಎಲ್ಲ ಪಕ್ಷದ ನಾಯಕರು ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ.
ಇಂದು ರಾಜ್ಯಕ್ಕೆ ನಾಯಕರ ದಂಡೇ ಆಗಮಿಸಲಿದ್ದು, ಎಲ್ಲೆಡೆ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಕೋಟೆ ನಾಡು ಚಿತ್ರದುರ್ಗಕ್ಕೆ ಇಂದು ಪ್ರಧಾನಿ ಮೋದಿ ಆಗಮಿಸಲಿದ್ದು, ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 10:30ಕ್ಕೆ ಪ್ರಧಾನಿ ಮೋದಿ ಚಿತ್ರದುರ್ಗಕ್ಕೆ ಆಗಮಿಸಲಿದ್ದು, 11 ಗಂಟೆಯಿಂದ ಚಳ್ಳಕೆರೆಯಲ್ಲಿ ಪ್ರಚಾರ ಆರಂಭಿಸಲಿದ್ದಾರೆ.
ಚಾಮರಾಜನಗರದಲ್ಲಿ ಕೇಂದ್ರ ಸಚಿವ ಅಮಿತ್ ಶೋ ಬಿಜೆಪಿ ಅಭ್ಯರ್ಥಿಗಳ ಪರ ಭಾರೀ ಪ್ರಚಾರ ನಡೆಸಲಿದ್ದಾರೆ. ಹನೂರು, ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ಆರಂಭಿಸಲಿದ್ದಾರೆ. ಸಿದ್ದರಾಮಯ್ಯ ಭದ್ರಕೋಟೆ ವರುಣಾದ ಮೇಲೆ ಶಾ ಕಣ್ಣಿಟ್ಟಿದ್ದು, ಬೆಳಗ್ಗೆ ಹೊಸಕೋಟೆಯಲ್ಲಿ ಸಮಾವೇಶ ನಡೆಸಲಿದ್ದಾರೆ. ತದನಂತರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಇನ್ನು ದಾವಣಗೆರೆ ಹಾಗೂ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮತಬೇಟೆ ಜೋರಾಗಿದ್ದು, ರಾಹುಲ್ ಗಾಂಧಿ ಎರಡೂ ಕಡೆ ತೆರಳಿ ಮತಯಾಚನೆ ಮಾಡಲಿದ್ದಾರೆ. ಹರಿಹರದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಚಿಕ್ಕಮಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಪರ ಪ್ರಚಾರಕ್ಕಿಳಿಯಲಿದ್ದಾರೆ, ಇನ್ನು ರಾಮನಗರದಲ್ಲಿ ಸುಮಲತಾ ಪ್ರಚಾರ ಮಾಡಲಿದ್ದಾರೆ.