ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಟ್ಸ್ಆ್ಯಪ್ ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 47 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ.
2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮಾರ್ಚ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ಇದರ ಜೊತೆಗೆ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ 4,715,906 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.
ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಕೂಡ ಭಾರತದಲ್ಲಿ 46 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್ಆ್ಯಪ್ ಹೇಳಿತ್ತು.
ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.