ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಿನ ಜನಪ್ರಿಯ ಹಾಸ್ಯ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿಯೂ ಹೆಸರಾಗಿರುವ ಮನೋಬಾಲ ಅವರು ಇಂದು ನಿಧನರಾಗಿದ್ದಾರೆ.
ಅವರಿಗೆ 69 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಚೆನ್ನೈನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮನೋಬಾಲ ಅವರ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.