ದೇವರ ಹೆಸರಿನಲ್ಲಿ ಬಿಜೆಪಿ ರಾಜಕೀಯ, ಕಿಡಿ ಕಾರಿದ ಡಿಕೆಶಿ

ಹೊಸದಿಗಂತ ವರದಿ ಮೈಸೂರು:

ದೇವರ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಯ ಹಾಗೂ ಬಿಜೆಪಿಯವರು ರಾಜಕೀಯ ನಡೆಸಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಗುರುವಾರ ಮೈಸೂರಿಗೆ ಭೇಟಿ ನೀಡಿದ ಅವರು, ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಜನೇಯ ಹುಟ್ಟಿದ ಸ್ಥಳ ಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ವಿಶೇಷ ಮಂಡಳಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗರಿಗೆ ಗಾಬರಿಯಾಗಿದೆ. ಹಾಗಾಗಿ ದೇವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸವಿದೆ. ಬಜರಂಗದಳ ಒಂದು ರಾಜಕೀಯ ಪಕ್ಷದ ಭಾಗ. ಹುಟ್ಟುವ ಎಲ್ಲವೂ ಬಸವ ಆಗುವುದಕ್ಕೆ ಸಾಧ್ಯವಿಲ್ಲ. ಆಂಜನೇಯನ ಹೆಸರಿಟ್ಟುಕೊಂಡವರೆಲ್ಲಾ ಆಂಜನೇಯ ಆಗಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಬಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದಾರೆ,ಬಜರಂಗ ಬಲಿಯ ನಿಜವಾದ ಭಕ್ತರು ನಾವು, ಬಜರಂಗಿಯ ಕುಂಕುಮ ನನ್ನ ಹಣೆಯಲ್ಲಿಯೇ ಇದೆ ಎಂದು ಹೇಳಿದರು.
ಕನ್ನಡ ನಾಡಿನಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಇತಿಹಾಸ ಸೃಷ್ಟಿಸಿದ ಆಂಜನೇಯ ದೇವಾಲಯ ಅಭಿವೃದ್ಧಿಗೆ ಕಾಂಗ್ರೆಸ್ ವಿಶೇಷ ಒತ್ತು ನೀಡಲಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!