ಹೊಸದಿಗಂತ ವರದಿ, ಮಳವಳ್ಳಿ:
ಪಟ್ಟಣದ ಹೊರವಲಯದ ಮಾರೇಹಳ್ಳಿ ಕೆರೆ ಬಳಿಯ ನ.24ರಂದು ಗೂಡ್ಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ವಡ್ಡರಹಳ್ಳಿ ಗ್ರಾಮದ ಮೋಹಿತ್(20) ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮಾರೇಹಳ್ಳಿ ಕೆರೆ ಏರಿ ರಸ್ತೆಯಲ್ಲಿ ನ.24ರಂದು ಬೈಕ್ ನಲ್ಲಿ ತೆರಳುತ್ತಿದ್ದ ಮೋಹಿತ್ ಗೆ ಎದುರಿನಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

