March 31, 2026
Tuesday, March 31, 2026
spot_img

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿದ ಅಧಿಕೃತ ಆದೇಶದಲ್ಲಿ, ಈ ನೇಮಕಾತಿಯನ್ನು ಪಕ್ಷದ ಸಂಸದೀಯ ಮಂಡಳಿ ಅನುಮೋದಿಸಿದೆ ಎಂದು ತಿಳಿಸಲಾಗಿದೆ. ನಿತಿನ್ ನವೀನ್ ಪ್ರಸ್ತುತ ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

‘ಬಿಜೆಪಿ ಸಂಸದೀಯ ಮಂಡಳಿಯು ಬಿಹಾರ ಸರ್ಕಾರದ ಸಚಿವರಾದ ನಿತಿನ್ ನವೀನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಿತಿನ್ ನಬಿ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಾಯಕ ನಿತಿನ್ ನಬಿಗೆ ಅಭಿನಂದನೆಗಳು. ಯುವ ನಾಯಕ ತನ್ನ ಕಠಿಣ ಪರಿಶ್ರಮದ ಮೂಲಕ ಪಕ್ಷದಲ್ಲಿ ಅಪಾರ ಅನುಭವ ಪಡೆದಿದ್ದಾರೆ. ಬಿಹಾರದಲ್ಲಿ ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನರ ಆಶೋತ್ತರಗಳು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ ನಿತಿನ್ ನಬಿ ಕಾರ್ಯಾಧ್ಯಕ್ಷತೆಯಲ್ಲಿ ಬಿಜೆಪಿ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ. ನಿತಿನ್ ನಬಿನ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !