ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಮ್ಯಾ ಅವರ ಮುದ್ದಿನ ಶ್ವಾನ ʻಚಾಂಪ್ʼ ಕಾಣೆಯಾದ ಕೆಲವೇ ಗಂಟೆಗಳಲ್ಲೇ ಸಾವನ್ನಪ್ಪಿದೆ. ಈ ಕುರಿತು ರಮ್ಯಾ ಸ್ಪಷ್ಟಪಡಿಸಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವಿಷಯವನ್ನು ಹಂಚಿಕೊಂಡಿದ್ದಾರೆ.
ʻಚಾಂಪ್ ಇನ್ನಿಲ್ಲ, ಅವನನ್ನು ಹುಡುಕಲು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದʼಗಳನ್ನು ತಿಳಿಸಿದ್ದಾರೆ.
ನಿನ್ನೆ ನಾಯಿ ಕಾಣೆಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಚುನಾವಣಾ ಪ್ರಚಾರದಲ್ಲಿದ್ದ ಅವರು ತಕ್ಷಣ ಬೆಂಗಳೂರಿಗೆ ಹಿಂದಿರುಗಿದರು. ತಮ್ಮ ಸೋಶಿಯಲ್ ಮೀಡಿಯಾ ಮೂಲಕ ನನ್ನ ನಾಯಿ ಕಾಣೆಯಾಗಿದೆ ಹುಡುಕಿಕೊಡಿ ಎಂದು ಮನವಿ ಮಾಡಿದ್ದರು. ಮೇ 6 ರಂದು ಬೆಳಿಗ್ಗೆ ರೇಸ್ಕೋರ್ಸ್ ರಸ್ತೆಯ ತಾಜ್ ವೆಸ್ಟ್ಎಂಡ್ನಿಂದ ನಾಯಿ ಕಾಣೆಯಾಗಿದೆ. ಸುರಕ್ಷಿತವಾಗಿ ಹುಡುಕಿಕೊಟ್ಟವರಿಗೆ ಸೂಕ್ತ ಉಡುಗೊರೆಯನ್ನೂ ಘೋಷಿಸಿದ್ದರು.