October 9, 2026
Friday, October 9, 2026
spot_img

ಶಾಮನೂರು ಶಿವಶಂಕರಪ್ಪ ವಿಧಿವಶ: ನಾಳೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ.

ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರುಶನಕ್ಕೆ ಇಡಲಾಗುತ್ತಿದೆ ಎಂಬುದಾಗಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

Must Read