March 26, 2026
Thursday, March 26, 2026
spot_img

ಶಾಮನೂರು ಶಿವಶಂಕರಪ್ಪ ವಿಧಿವಶ: ನಾಳೆ ದಾವಣಗೆರೆ ವಿವಿಯ ಎಲ್ಲಾ ಕಾಲೇಜುಗಳಿಗೆ ರಜೆ, ಪರೀಕ್ಷೆಗಳು ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾದ ಹಿನ್ನೆಲೆ ನಾಳೆ (ಡಿ.15) ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳೂ ಮುಂದೂಡಿಕೆಯಾಗಿದೆ.

ಸೋಮವಾರ ನಡೆಯಲಿರುವ ಎಲ್ಲಾ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿರುವುದಾಗಿ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸಿ.ಕೆ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಮುಂದೂಡಿಕೆಯಾದ ಪರೀಕ್ಷಾ ದಿನಾಂಕವನ್ನ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ ನಾಳೆ ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶಾಮನೂರು ಅವರು ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !