ನಾಳೆ ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಎಲ್ಲರ ಚಿತ್ತ ಮೇ 10 ರ ಕಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಎಲ್ಲೆಡೆ ಬಿರುಸಿನ ಪ್ರಚಾರ ನಡೆಯುತ್ತಿದೆ.

ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಹಿನ್ನೆಲೆ ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ.

ಈ ಸಮಯ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ.

ಬಹಿರಂಗ ಪ್ರಚಾರ ಮುಗಿಸಿದ ಬಳಿಕ ಸ್ಟಾರ್​ ಪ್ರಚಾರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!