ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತೆಲಂಗಾಣ ಮೂಲದ ಯುವತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಶನಿವಾರ (ಮೇ 8, 2023), ಟೆಕ್ಸಾಸ್‌ನ ಶಾಪಿಂಗ್ ಮಾಲ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಪ್ರಾಣ ಕಳೆದುಕೊಂಡರು. ಮೃತರಲ್ಲಿ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ನ್ಯಾಯಾಧೀಶರೊಬ್ಬರ ಪುತ್ರಿ ಐಶ್ವರ್ಯಾ ಕೂಡ ಸೇರಿದ್ದಾರೆ. ಐಶ್ವರ್ಯಾ ತಂದೆ ತಾಟಿಕೊಂಡ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಪಿಂಗ್ ಮಾಲ್‌ನಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಟೆಕ್ಸಾಸ್‌ನ ಡಲ್ಲಾಸ್‌ನಿಂದ 25 ಕಿಲೋಮೀಟರ್ ದೂರದಲ್ಲಿರುವ ದೊಡ್ಡ ಮಾಲ್ ಅಲೆನ್ ಪ್ರೀಮಿಯಂ ಔಟ್‌ಲೆಟ್‌ನಲ್ಲಿ ಶನಿವಾರ ಮಧ್ಯಾಹ್ನ 3.30 ರ ವೇಳೆಗೆ ಗುಂಡಿನ ದಾಳಿ ನಡೆದಿದ್ದು, ಸ್ಥಳೀಯ ಪ್ರದೇಶದಲ್ಲಿ ಸಾಕಷ್ಟು ಭೀತಿ ಹುಟ್ಟಿಸಿದೆ. ಶೂಟಿಂಗ್ ನಡೆದ ಶಾಪಿಂಗ್ ಮಾಲ್ ನಲ್ಲಿ ವಿವಿಧ ಕಂಪನಿಗಳ 120 ಮಳಿಗೆಗಳಿವೆ. ಇದು ಸುಮಾರು ಒಂದು ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಶನಿವಾರ ವಾರಾಂತ್ಯವಾದ್ದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಶಾಪಿಂಗ್ ಮಾಲ್‌ಗೆ ಆಗಮಿಸಿದ್ದರು.

ಈ ವೇಳೆ ವ್ಯಕ್ತಿಯೊಬ್ಬ ಕಾರಿನಲ್ಲಿ ಮಾಲ್‌ಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ಸದ್ದು ಕೇಳಿ ಅಲ್ಲಿದ್ದವರೆಲ್ಲ ಗಾಬರಿಗೊಂಡರು. ದಾಳಿಕೋರನ ಗುಂಡಿಗೆ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಆ ಸಮಯದಲ್ಲಿ ಮಾಲ್‌ನಲ್ಲಿದ್ದ ಅಲೆನ್ ಪೊಲೀಸ್ ಅಧಿಕಾರಿಯೊಬ್ಬರು ಎಚ್ಚೆತ್ತು ದಾಳಿಕೋರನಿಗೆ ಗುಂಡು ಹಾರಿಸಿದ್ದಾರೆ. ನಂತರ ತಕ್ಷಣ ತುರ್ತು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here