ಹೊಸದಿಗಂತ ಡಿಜಿಟಲ್ ಡೆಸ್ಕ್:
‘ದಿ ಕೇರಳ ಸ್ಟೋರಿ’ ಸಿನಿಮಾಗೆ ಒಂದೆಡೆ ವಿರೋಧ ವ್ಯಕ್ತವಾಗುತ್ತಿದ್ದರೆ, ಇತ್ತ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಸರ್ಕಾರಗಳು ತೆರಿಗೆ ವಿನಾಯಿತಿ ನೀಡಲು ಅನುಮತಿಸಿವೆ.
ಇದರ ಬೆನ್ನಲ್ಲೇ ಇದೀಗ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ.
ಕೇರಳದ ಸತ್ಯ ಕಥೆ ಬಿಂಬಿಸುವ ಈ ಚಿತ್ರವನ್ನು ಪ್ರತಿಯೊಬ್ಬರು ನೋಡಬೇಕು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಗಳವಾರ ಹೇಳಿದ್ದರು.
ಪಶ್ಚಿಮ ಬಂಗಾಳ ಸರ್ಕಾರ ಚಿತ್ರಮಂದಿರಗಳಲ್ಲಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನವನ್ನು ನಿಷೇಧಿಸಿದೆ ಮತ್ತು ತಮಿಳುನಾಡಿನ ಮಲ್ಟಿಪ್ಲೆಕ್ಸ್ಗಳು ಭಾನುವಾರದಿಂದ ಪ್ರದರ್ಶನಗಳನ್ನು ರದ್ದುಗೊಳಿಸಿವೆ.