ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಮತ ಹಾಕಲು ವೋಟರ್ ಇಲ್ಲ ಅಂತಾದ್ರೆ ಈ ಕೆಳಗಿನ ದಾಖಲೆಗಳನ್ನು ಬಳಸಿ ಕೂಡ ಮತದಾನ ಮಾಡಬಹುದು.
ವೋಟರ್ ಇಲ್ಲ ಅಂದ್ರೆ ಈ ದಾಖಳೆಗಳನ್ನು ಬಳಸಿ ಮತ ಚಲಾಯಿಸಿ
1) ಪಾಸ್ಪೋರ್ಟ್
2) ಚಾಲನಾ ಪರವಾನಗಿ
3) ಕೇಂದ್ರ/ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿರುವ ಫೋಟೋ ಗುರುತಿನ ಚೀಟಿ
4) ಬ್ಯಾಂಕ್ / ಪೋಸ್ಟ್ ಆಫೀಸ್ ಫೋಟೋವುಳ್ಳ ಪಾಸ್ ಬುಕ್
5) ಪಾನ್ ಹೊಂದಿರುವ ಕಾರ್ಡ್, 6) ಎನ್ಪಿಆರ್ ಅಡಿ ಅರ್ಜಿ ನೀಡಿರುವ ಸ್ಮಾರ್ಟ್ ಕಾರ್ಡ್
7) ಎಂನರೇಗಾ ಜಾಬ್ ಕಾರ್ಡ್
8) ಕಾರ್ಮಿಕರ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
9) ಫೋಟೋವುಳ್ಳ ಪಿಂಚಣಿ ದಾಖಲೆ
10) ಚುನಾವಣಾ ಆಯೋಗದ ವತಿಯಿಂದ ನೀಡುವ ದೃಢೀಕೃತ ಫೋಟೋ ವೋಟರ್ ಸ್ಲಿಪ್ಸ್
11) ಸಂಸದರು/ವಿಧಾನಸಭಾ/ವಿಧಾನ ಪರಿಷತ್ತಿನ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ
12) ಆಧಾರ್ ಕಾರ್ಡ್
ಇವುಗಳಲ್ಲಿ ಯಾವುದಾದರೂ ಗುರುತಿನ ಚೀಟಿ ಬಳಸಿ ಮತದಾನ ಮಾಡಬಹುದು.