ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮತದಾನದ ಮುಗಿದ ಬೆನ್ನಲ್ಲೇ ಮಂಗಳೂರಲ್ಲಿ ಹೊರವಲಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ.
ಗಲಾಟೆಯಲ್ಲಿ ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ದ್ವಂಸವಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಕಲ್ಲು ತೂರಾಟದ ವೇಳೆ ಪೊಲೀಸ್ ಸಿಬ್ಬಂದಿ ತಲೆಗೆ ಸಹ ಗಾಯವಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.