ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೋತ್ತರ ಸಮೀಕ್ಷೆ ಪ್ರಕಟವಾದ ಬೆನ್ನಲ್ಲೇ ರಾಜಕೀಯ ನಾಯಕರು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದು, ಸಿದ್ಧರಾಮಯ್ಯ ಕೂಡ ನಾನು ವರುಣಾದಲ್ಲಿ ಗೆಲ್ಲುವುದು ಖಚಿತ, ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರಲಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಆರಾಮಾಗಿ ಬಹುಮತವನ್ನು ಪಡೆಯುತ್ತದೆ. ವರುಣಾ ಕ್ಷೇತ್ರದಲ್ಲಿ ನಾನು ಆರಾಮವಾಗಿ ಗೆಲ್ಲುತ್ತೇನೆ ಎಂದರು.
ಹುಬ್ಬಳ್ಳಿ ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ, ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿದೆ. ಬೇರೆ ಯಾವುದೇ ಪಕ್ಷದೊಂದಿಗೆ, ವಿಶೇಷವಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.