ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ 25 ವರ್ಷದ ವಿನಯ್ ಕುಮಾರ್ ಎಂಬಾತನಿಂದ ಹಲ್ಲೆ ನಡೆದಿದೆ. ಬಾಲಕಿ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಬಾಲಕಿಯ ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಬಾಲಕಿಯನ್ನ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸಾವು ಬದುಕಿನ ನಡುವೆ ಆಕೆ ಹೋರಾಡುತ್ತಿದ್ದಾಳೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.