ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೈಂದೂರಿನ ಹಾಲಿ ಶಾಸಕರಾದ ಬಿ.ಸುಕುಮಾರ್ ಶೆಟ್ಟಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರ ಸಹಿ ಇರುವ ನಕಲಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ವಿಷಯ. ಇಂತಹ ಯಾವುದೇ ರೀತಿಯ ಬೆಳವಣಿಗೆ ಆಗಿರುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ಪಷ್ಟಪಡಿಸಿದ್ದಾರೆ.