ಹೊಸದಿಗಂತ ವರದಿ ಧಾರವಾಡ:
ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ, ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿಸೆ.
ಸೆಂಟ್ರಲ್ ಕ್ಷೇತ್ರದ ಬಿಜೆಪಿ ಮಹೇಶ ಟೆಂಗಿನಕಾಯಿ, ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಅಬ್ಬಯ್ಯ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹು-ಧಾ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ, ನವಲಗುಂದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ ಮುನೇನಕೊಪ್ಪ ಮುನ್ನಡೆ ಸಾಧಿಸಿದ್ದಾರೆ.
ಕಲಘಟಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ ಲಾಡ್, ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ, ಕುಂದಗೋಳ ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ.