ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ವಿ.ಸೋಮಣ್ಣ ಎರಡೂ ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋತಿದ್ದಾರೆ.
ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣನಿಗೆ ಮುಖಭಂಗವಾಗಿದೆ. ಸಿದ್ದರಾಮಯ್ಯನವರನ್ನು ವರುಣಾ ಕ್ಷೇತ್ರದ ಜನ ಕೈ ಹಿಡಿದು ಗೆಲ್ಲಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಿಎಂ ಆಗಿ, ಪ್ರಭಾವಿ ನಾಯಕನಾಗಿ ಬೆಳೆದಿರುವ ಸಿದ್ದರಾಮಯ್ಯ ಕೊನೆಗೂ ಗೆದ್ದಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟಫ್ ಫೈಟ್ ಎದುರಾಗಿದ್ದರೂ ಜೆಡಿಎಸ್ ಆಟ ನಡೆದಿಲ್ಲ.