ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯ ಮುತ್ಸದ್ದಿ, ದಾವಣಗೆರೆ ಧಣಿ, ಜನರಿಗಾಗಿಯೇ ಜೀವನ ಮುಡಿಪಿಟ್ಟ ಹಿರಿಯ ಜೀವ ಶಾಮನೂರು ಶಿವಶಂಕರಪ್ಪ ಇಹ ಲೋಕ ತ್ಯಜಿಸಿದ್ದು, ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.
ದಾವಣೆಗೆರೆಯ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು. ಶಾಮನೂರು ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅವರೂ ಇದರಲ್ಲಿ ಪಾಲ್ಗೊಂಡರು.
ಅಂತ್ಯಕ್ರಿಯೆಯ ವೇಳೆ ಶಾಮನೂರರ ಪಾರ್ಥಿವ ಶರೀರಕ್ಕೆ ಪೊಲೀಸರು ತ್ರಿವರ್ಣ ಧ್ವಜ ಹೊದಿಸಿ ಗೌರವ ಸೂಚಿಸಿದರು, ಇದಾದಮೇಲೆ ಶಾಮನೂರು ಪುತ್ರ ಧ್ಚಜ ಸ್ವೀಕರಿಸಿದರು. ನಂತರ ರಾಷ್ಟ್ರಗೀತೆಯೊಂದಿಗೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ವಿಶೇಷ ಗೌರವ ಸಲ್ಲಿಸಿದರು. ಬಳಿಕ ವಾದ್ಯವಂದನೆ ಅರ್ಪಿಸಿ, ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

