ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಯಲ್ಲಿ ಸೋಲುಕಂಡ ಬಳಿಕ ಹೊನ್ನಾಳಿ ಕ್ಷೇತ್ರದಲ್ಲಿ (MP Renukacharya) ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ.ಇದು ನನ್ನ ಸ್ಪಷ್ಟ ನಿರ್ಧಾರ ಎಂದು ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಶನಿವಾರವೇ ರಾಜಕೀಯ ನಿವೃತ್ತಿ ಘೋಷಿಸಿದ್ದ ರೇಣುಕಾಚಾರ್ಯ ಅವರ ಮನವೊಲಿಕೆ ಪ್ರಯತ್ನ ನಡೆದಿತ್ತು. ಅಲ್ಲದೆ, ಅವರ ಬೆಂಬಲಿಗರೂ ಭೇಟಿ ಮಾಡಿ, ಯಾವುದೇ ಕಾರಣಕ್ಕೂ ನಿವೃತ್ತಿಯಾಗುವುದು ಬೇಡ ಎಂದು ಒತ್ತಾಯಿಸಿದ್ದರು. ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಯಾವುದೇ ಕಾರಣಕ್ಕೂ ನಾನು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ನನ್ನ ನಿರ್ಧಾರ ಅಂತಿಮ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಎನ್ನುವ ಸುಳ್ಳು ಭರವಸೆಗಳು ಸೇರಿ ಹತ್ತು ಹಲವು ಕಾರಣಗಳಿಂದ ಕ್ಷೇತ್ರದಲ್ಲಿ ನಾನು ಸೋತೆ. ಇನ್ನು ನಾನು ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೆ. ಆದರೆ ಜನಾದೇಶ ಹೀಗೆ ಇರುವಾಗ ನಾನು ತಲೆಬಾಗಲೇಬೇಕು. ಮುಂದೆ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿದ ಎಂ.ಪಿ. ರೇಣುಕಾಚಾರ್ಯ ಅವರ ಹೊನ್ನಾಳಿಯ ನಿವಾಸದ ಮುಂದೆ ಸಾವಿರಾರು ಬೆಂಬಲಿಗರು, ಕಾರ್ಯಕರ್ತರು ಜಮಾಯಿಸಿದ್ದರು. ಅವರನ್ನು ನೋಡಿ ರೇಣುಕಾಚಾರ್ಯ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಅವರಿಗೆ ಧೈರ್ಯ ತುಂಬಿದ್ದಾರೆ.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ, ಕೋವಿಡ್‌ನಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದರೂ ಜನರು ಸೋಲಿಸಿದರು ಎಂದು ನೋವು ತೋಡಿಕೊಂಡ ರೇಣುಕಾಚಾರ್ಯ, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಹೇಳಿದರು.