ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ, ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಪಿಕಪ್ ವ್ಯಾನ್ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಕೂಡ ಇದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗಾಯಾಳುಗಳು ಸದ್ಯ ಬಲೋದಬಜಾರ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಲಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಈ ವಿಷಯ ತಿಳಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.