ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇನೋ ನಿಶ್ಚಿತ. ಅದರೆ ಇದೀಗ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿದ್ದು, ಸಿಎಂ ಕುರ್ಚಿಗಾಗಿ ಡಿಕೆಶಿ, ಸಿದ್ದರಾಮಯ್ಯ ನಡುವೆ ಫೈಟ್ ಶುರುವಾಗಿದೆ. ಎರಡೂ ಕಡೆ ಬೆಂಬಲಿಗರು ಘರ್ಷಣೆಗಿಳಿದಿದ್ದು, ಸಿಎಂ ಆಯ್ಕೆ ಹೈಕಮಾಂಡ್ ಬಳಿ ತೆರಳಿದೆ. ಈ ಹಿನ್ನೆಲೆ ಇಂದು ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ.
ನಿನ್ನೆಯಿಂದ ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಸಿಎಂ ಗಾದಿಗಾಗಿ ಪಟ್ಟು ಹಿಡಿದು ಕುಳಿತ ಸಿದ್ದು,-ಡಿಕೆಶಿ ನಡುವಿನ ಸಮರ ಮಗಿಯುವಂತೆ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಂದು ನವದೆಹಲಿಗೆ ತೆರಳಲಿದ್ದಾರೆ.
ಸಿಎಂ ಯಾರಾಗಬೇಕು ಎಂಬ ವಿಚಾರಕ್ಕೆ ಹೈಕಮಾಂಡ್ ಮೊರೆ ಹೋಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯನ್ನೂ ದೃಷ್ಟಿಯಲ್ಲಿಟ್ಟುಕೊಂಡು ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಲಿದ್ದಾರೆ.