Tuesday, December 16, 2025

ಸವಣೂರು ಶಿಕ್ಷಕನಿಗೆ ಚಪ್ಪಲಿ ಹಾಕಿ ಥಳಿತ ಪ್ರಕರಣ: ಇನ್‌ಸ್ಪೆಕ್ಟರ್,ಹೆಡ್ ಕಾನ್‌ಸ್ಟೆಬಲ್‌ ಅಮಾನತು

ಹೊಸದಿಗಂತ ವರದಿ ಹಾವೇರಿ:

ಸವಣೂರಿನ ಸರ್ಕಾರಿ ಉರ್ದು ಶಾಲೆ ಶಿಕ್ಷಕ ಜಗದೀಶ್ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸವಣೂರು ಪೊಲೀಸ್ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಹಾಗೂ ಹೆಡ್ ಕಾನ್‌ಸ್ಟೆಬಲ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಉರ್ದು ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕೆಲವರು ಶಿಕ್ಷಕ ಜಗದೀಶ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ಡಿ.೧೦ರಂದು ಮೆರವಣಿಗೆ ಮಾಡಿದ್ದರು. ಈ ಘಟನೆ ಬಗ್ಗೆ ಪ್ರಾಥಮಿಕ ಮಾಹಿತಿ ಕಲೆಹಾಕಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಯಶೋಧಾ ವಂಟಗೋಡಿ ದಕ್ಷಿಣ ವಲಯ ದಾವಣಗೆರೆ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರಿಗೆ ವರದಿ ಸಲ್ಲಿಸಿದ್ದರು.

ವರದಿ ಆಧರಿಸಿ ಇನ್‌ಸ್ಪೆಕ್ಟರ್ ಎಸ್. ದೇವಾನಂದ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇಲಾಖಾ ವಿಚಾರಣೆಗೂ ನಿರ್ದೇಶನ ನೀಡಿದ್ದಾರೆ. ಹೆಡ್ ಕಾನ್‌ಸ್ಟೆಬಲ್ ಮಲ್ಲಿಕಾರ್ಜುನ ಒದುನವರ ಅವರನ್ನು ಎಸ್‌ಪಿ ಯಶೋಧಾ ವಂಟಗೋಡಿ ಅವರೇ ಅಮಾನತು ಮಾಡಿ ಆದೇಶಿಸಿದ್ದಾರೆ.

error: Content is protected !!