Tuesday, December 16, 2025

‘ವೋಟ್‌ ಚೋರಿ’ ಆರೋಪ ಚುನಾವಣಾ ಪ್ರಕ್ರಿಯೆಯ ಮೇಲೆ ಅನುಮಾನ ಬಿತ್ತುವ ಪ್ರಯತ್ನ: ಹೆಚ್.ಡಿ. ದೇವೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ಪ್ರಕ್ರಿಯೆಯ ಮೇಲೆ ಅನುಮಾನ ಬಿತ್ತುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದ್ದು, ಇಂಥ ನಡೆ ಮುಂದುವರಿಸಿದರೆ ಪ್ರತಿಪಕ್ಷಗಳೇ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಸೋಮವಾರ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ “ವೋಟ್‌ ಚೋರಿ” ಎಂಬ ಪದ ಬಳಸಿ ಸುಳ್ಳಿನ ಕಥಾನಕ ಕಟ್ಟಲಾಗುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಪಕ್ಷಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ರಾಜಕೀಯ ಸಭೆಗಳಲ್ಲಿ ಪ್ರಧಾನಿಯವರ ವಿರುದ್ಧ ಅವಾಚ್ಯ ಟೀಕೆ ನಡೆಸುತ್ತಿರುವುದು ಸರಿಯಲ್ಲ ಎಂದ ಅವರು, ಹೀಗೆ ನಿರಂತರವಾಗಿ ಸುಳ್ಳು ಪ್ರಚಾರ ಮಾಡಿದರೆ ಮತದಾರರ ಮನಸ್ಸಿನಲ್ಲಿ ಗೊಂದಲ ಉಂಟಾಗುತ್ತದೆ, ಆದರೆ ಅದು ದೀರ್ಘಾವಧಿಯಲ್ಲಿ ಪ್ರತಿಪಕ್ಷಗಳಿಗೆ ಹಾನಿಕಾರಕವಾಗಲಿದೆ ಎಂದು ಹೇಳಿದರು. ತಾನು ಏಳು ದಶಕಕ್ಕೂ ಹೆಚ್ಚು ಕಾಲ ಚುನಾವಣಾ ರಾಜಕಾರಣದಲ್ಲಿ ಸೋಲು-ಗೆಲುವು ಕಂಡಿದ್ದೇನೆ, ಆದರೆ ಎಂದಿಗೂ ಮತಗಳ್ಳತನ ಎಂಬ ಆರೋಪ ಮಾಡಿಲ್ಲ ಎಂದು ದೇವೇಗೌಡ ಸ್ಪಷ್ಟಪಡಿಸಿದರು.

error: Content is protected !!