Tuesday, December 16, 2025

ಪರಪ್ಪನ ಅಗ್ರಹಾರಕ್ಕೆ ಡಿಜಿಪಿ ಅಲೋಕ್‌ ಕುಮಾರ್‌ ಭೇಡಿ: ಎಲ್ಲ ಬಂದ್‌ ಆಗ್ಬೇಕು ಎಂದು ಖಡಕ್‌ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಧಿಖಾನೆ ಡಿಜಿಪಿಯಾಗಿ ನೇಮಕದ ಬಳಿಕ ಮೊದಲ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಮೊದಲ ಭೇಟಿ ನೀಡಿದ್ದು, ಈ ವೇಳೆ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದು, ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್​ ಅವರನ್ನ ಪೊಲೀಸ್​​ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.

ಅಧಿಕಾರ ಸ್ವೀಕಾರ ಬಳಿಕ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಲೋಕ್ ಕುಮಾರ್ ಅವರು ಜೈಲಿನ ಚೆಕ್ ಪೋಸ್ಟ್ ಬಳಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಜೈಲಿನ ಅಧಿಕಾರಿಗಳ ಜೊತೆ ಸೆಂಟ್ರಲ್ ಜೈಲಿನ ಸುತ್ತಮುತ್ತ ಓಡಾಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿ ಬ್ಯಾರಕ್​​ಗೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಇನ್ನು ಇದೇ ವೇಳೆ ಡಿಜಿಪಿ ಅಲೋಕ್ ಕುಮಾರ್ ಅವರು ಕೊಲೆ ಆರೋಪಿ ದರ್ಶನ್ ಬ್ಯಾರಕ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣದ ವಿಚಾರಣೆ ಬಗ್ಗೆ ವಿಚಾರಣೆ ಪಡೆದುಕೊಂಡರು.

ದರ್ಶನ್​ ಬಳಿ ಪ್ರಕರಣದ ಬಗ್ಗೆ ವಿವರಣೆ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ಜೈಲು ಪರಿಶೀಲನೆ ವೇಳೆ ದರ್ಶನ್ ಭೇಟಿ ಮಾಡಿ ಪ್ರಕರಣದ ವಿಚಾರಣೆ ಬಗ್ಗೆ ವಿವರಣೆ ಪಡೆದಿದ್ದೇನೆ. ಇದೇ 17ರಂದು ನ್ಯಾಯಾಲಯದ ವಿಚಾರಣೆ ಇದೆ. ತಮ್ಮ ಭೇಟಿ ವೇಳೆ ದರ್ಶನ್ ಯಾವುದೇ ಕುಂದುಕೊರತೆ ಬಗ್ಗೆ ಹೇಳಿಲ್ಲ. ದರ್ಶನ್​​ ಸೇರಿ ಆರು ಮಂದಿ ಒಂದೇ ಬ್ಯಾರಕ್ ನಲ್ಲಿ ಎಲ್ಲರಂತೆ ಇದ್ದಾರೆ ಎಂದು ಸ್ಪಷ್ಟಪಡಿಸಿದರು.

ಕೈದಿಗಳಿಗೆ ರಾಜಾತಿಥ್ಯ ವಿಚಾರ ವ್ಯಾಪಕ ಸುದ್ದಿಯಲ್ಲಿರುವಂತೆಯೇ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದ ನೂತನ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಡಿಜಿಪಿ ಅಲೋಕ್​​ ಕುಮಾರ್​​ ಜೈಲಿನ ಹೊರಾಂಗಣ ಸೇರಿ ಪ್ರತಿ ಬ್ಯಾರಕ್​​, ಅಡುಗೆ ಮನೆ, ಆಸ್ಪತ್ರೆ, ಬೇಕರಿಗಳಿಗೂ ತೆರಳಿ ಎಲ್ಲಾ ಪರಿಶೀಲನೆ ಮಾಡಿದರು.

ಈ ವೇಳೆ ಅಲೋಕ್ ಕುಮಾರ್ ಅವರು ಕೈದಿಗಳ ಬಳಿಯು ಮಾಹಿತಿ ಕಲೆ ಹಾಕಿದರು. ಊಟ, ತಿಂಡಿ, ಶೌಚಾಲಯ ವ್ಯವಸ್ಥೆ ಬಗ್ಗೆ ಕೈದಿಗಳಿಗೆ ಡಿಜಿಪಿ ಪ್ರಶ್ನೆ ಕೇಳಿದ್ದು, ಮೊಬೈಲ್ ಬಳಕೆ ಮಾಡುತ್ತಿದ್ರೆ ಸಿಬ್ಬಂದಿ ವಶಕ್ಕೆ ನೀಡುವಂತೆ ತಾಕೀತು ಕೂಡ ಮಾಡಿದ್ದಾರೆ. ಅಂತೆಯೇ ಕಳ್ಳಾಟ ಆಡಿದ್ರೆ ಕಠಿಣ ಕ್ರಮ ಎದುರಿಸಲು ಸಜ್ಜಾಗಿ ಎಂದು ಎಚ್ಚರಿಕೆ ಕೂಡ ನೀಡಿದರು.

ಗಾಂಜಾ, ಬಿಡಿ ಸಿಗರೇಟ್ ಇನ್ಮೇಲೆ ಸಿಗಲ್ಲ. ಎಲ್ಲಾ ಬಂದ್ ಆಗಬೇಕು ಎಂದು ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ. ವೈದ್ಯರು ಚಿಕಿತ್ಸೆ ಮಾತ್ರ ಕೋಡಬೇಕು. ಅದನ್ನು ಬಿಟ್ಟು ಮೊಬೈಲ್, ಗಾಂಜಾ ಸಾಗಾಣೆ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ನೇರವಾಗಿ ಹೇಳಿದರು. ಅಡುಗೆ ಮನೆಯ ಸಿಬ್ಬಂದಿಗೂ ಎಚ್ಚರಿಸಿರುವ ಅವರು, ಎಡಿಷನಲ್​​ ಆ್ಯಕ್ಟಿವಿಟಿಗಳು ಬಂದ್​​ ಆಗಬೇಕು ಎಂದರು. ಬಳಿಕ ಜೈಲಿನ ಬೇಕರಿಗೂ ಡಿಜಿಪಿ ಭೇಟಿ ನೀಡಿದ ಅಲೋಕ್ ಕುಮಾರ್ ಅವರು, ಈಸ್ಟ್ ನಿಂದ ವೈನ್ ತಯಾರಿಸಿದ್ರೆ ವೈಲೆಂಟ್ ಆಗಬೇಕಾಗುತ್ತೆ ಎಂದು ಗರಂ ಆದರು.

error: Content is protected !!