ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಂದಿನ ಸಿಎಂ ಯಾರು? ಇನ್ನೇನು ಕೆಲವೇ ಹೊತ್ತಿನಲ್ಲಿ ಈ ಪ್ರಶ್ನೆಗೆ ಉತ್ತರ ಸಿಗುವ ಎಲ್ಲ ಸಾಧ್ಯತೆಗಳಿವೆ.
ಹೌದು, ಇದೀಗ ಸ್ವಲ್ಪ ಹೊತ್ತಿಗೂ ಮುಂಚೆ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ. ಅಲ್ಲಿ ಚರ್ಚೆ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಲಿದ್ದಾರೆ. ಅಲ್ಲಿಯೇ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.
ಶಿಮ್ಲಾದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇನ್ನೇನು ದೆಹಲಿಗೆ ಆಗಮಿಸಲಿದ್ದು, ಎಲ್ಲರ ಜೊತೆ ಮಾತುಕತೆ ಬಳಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎನ್ನುವ ಘೋಷಣೆಯಾಗಲಿದೆ.
ಸಿಎಂ ಆಗಿ ಸಿದ್ದರಾಮಯ್ಯ ಅವರ ಹೆಸರನ್ನು ಸೂಚಿಸಿದ ನಂತರ ನಾಳೆ ಬೆಂಗಳೂರಿನಲ್ಲಿ ಪ್ರಮಾಣವಚನ ಕಾರ್ಯ ನಡೆಯಲಿದೆ. ಸಿಎಂ ಸ್ಥಾನಕ್ಕೆ ಕಾದು ಕುಳಿತಿದ್ದ ಡಿ.ಕೆ. ಶಿವಕುಮಾರ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುವ ಡಿಮ್ಯಾಂಡ್‌ನ್ನು ಇಟ್ಟಿದ್ದಾರೆ ಎನ್ನಲಾಗಿದೆ.