ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಭಾವಚಿತ್ರದ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದುಕೊಂಡವರಿಗೆ ಗಂಭೀರ ಗಾಯಗೊಳ್ಳುವಂತೆ ಹೊಡೆದಿ ದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರ ಬೆನ್ನಲೇ ಗಾಯಗಳಾಗಿರುವ ಕುರಿತ ಫೋಟೋ, ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ತೀವ್ರ ಖಂಡಿಸಿದ್ದು, ಹಿಂದು ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ.
ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ.
ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು.
— Nalinkumar Kateel (@nalinkateel) May 17, 2023