ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತೂ ರಾಜ್ಯದ ಮುಖ್ಯಮಂತ್ರಿ ಸ್ಥಾನ್ಕಕೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರನ್ನು ಆಯ್ಕೆ ಮಾಡಿದೆ. ಡಿಕೆಶಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಕೊಂಡಿದ್ದು, ಈ ಬೆಳವಣಿಗೆ ಬಗ್ಗೆ ಸಂಸದ ಹಾಗೂ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಬೇಸರ ಹೊರ ಹಾಕಿದ್ದಾರೆ. ಇದರ ಬಗ್ಗೆ ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಸುರೇಶ್, ಇಂತಹ ಬೆಳವಣಿಗೆ ಬೇಸರ ತಂದಿದೆ. ಕಾದು ನೋಡುವ ತಂತ್ರ ಅನುಸರಿಸುವುದಾಗಿ ತಿಳಿಸಿದರು.
ʻಈ ನಿರ್ಧಾರದಲ್ಲಿ ನನಗೆ ಪೂರ್ಣ ಸಂತೋಷವಿಲ್ಲ ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಕರ್ನಾಟಕದ ಜನರಿಗಾಗಿ ಡಿ.ಕೆ.ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ಕಾದು ನೋಡುತ್ತೇವೆ, ಹೋಗಲು ಇನ್ನೂ ಬಹಳ ದೂರವಿದೆʼ ಎಂದರು.
ಕಳೆದ ಮೂರು ದಿನಗಳಿಂದ ಕೈ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಿಎಂ ಪಟ್ಟಕ್ಕಾಗಿ ಜಟಾಪಟಿ ಸಾಗಿತ್ತು. ನಿನ್ನೆ ಸೋನಿಯಾ ಗಾಂಧಿ ಸಂಧಾನದ ಮಾತುಕತೆ ಬಳಿಕ ಡಿ.ಕೆ.ಶಿವಕುಮಾರ್ ತಮ್ಮ ನಿರ್ಧಾರವನ್ನು ಸಡಿಲಿಕೆ ಮಾಡಿದ್ದು, ಅಧಿಕಾರವನ್ನು ಬೈ ಟು ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.