ಬೆಳಿಗ್ಗೆ ಸಮಯ ಕಡಿಮೆ ಇದ್ದರೂ ಹೊಟ್ಟೆ ತುಂಬುವ ಬ್ರೇಕ್‌ಫಾಸ್ಟ್ ಬೇಕಾದರೆ ಮಸಾಲಾ ಜೀರಾ ರೈಸ್ ಒಳ್ಳೆಯ ಆಯ್ಕೆ. ಹಿಂದಿನ ದಿನ ಉಳಿದ ಅನ್ನವನ್ನೇ ಬಳಸಿ ಕೆಲವೇ ನಿಮಿಷಗಳಲ್ಲಿ ತಯಾರಿಸಬಹುದಾದ ಈ ರೈಸ್, ಜೀರಿಗೆ ಹಾಗೂ ಮಸಾಲೆಗಳ ಪರಿಮಳದಿಂದ ದಿನದ ಆರಂಭವೇ ಖುಷಿಯಾಗಿರುತ್ತದೆ.
ಬೇಕಾಗುವ ಪದಾರ್ಥಗಳು:
ಬೇಯಿಸಿದ ಅನ್ನ – 2 ಕಪ್
ಜೀರಿಗೆ – 1 ಟೀಸ್ಪೂನ್
ಎಣ್ಣೆ ಅಥವಾ ತುಪ್ಪ – 2 ಟೀಸ್ಪೂನ್
ಈರುಳ್ಳಿ – 1
ಹಸಿಮೆಣಸು – 1–2
ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 1 ಟೀಸ್ಪೂನ್
ಅರಿಶಿನ ಪುಡಿ – ¼ ಟೀಸ್ಪೂನ್
ಗರಂ ಮಸಾಲಾ – ½ ಟೀಸ್ಪೂನ್
ಉಪ್ಪು – ರುಚಿಗೆ
ಕೊತ್ತಂಬರಿ ಸೊಪ್ಪು – ಸ್ವಲ್ಪ
ಮಾಡುವ ವಿಧಾನ:
ಕಡಾಯಿಯಲ್ಲಿ ಎಣ್ಣೆ ಅಥವಾ ತುಪ್ಪ ಬಿಸಿ ಮಾಡಿ ಜೀರಿಗೆ ಹಾಕಿ, ಈರುಳ್ಳಿ ಮತ್ತು ಹಸಿಮೆಣಸು ಸೇರಿಸಿ ಸ್ವಲ್ಪ ಸಾಫ್ಟ್ ಆಗುವವರೆಗೆ ಹುರಿಯಿರಿ. ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಹಸಿ ವಾಸನೆ ಹೋಗುವವರೆಗೆ ಹುರಿಯಬೇಕು. ನಂತರ ಅರಿಶಿನ ಪುಡಿ, ಗರಂ ಮಸಾಲಾ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ಈಗ ಅನ್ನವನ್ನು ಸೇರಿಸಿ ನಿಧಾನವಾಗಿ ಮಿಶ್ರಣ ಮಾಡಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಹಾಕಿ ಎರಡು ನಿಮಿಷ ದಂ ಮಾಡಿ ಆಫ್ ಮಾಡಿ.

