ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸುರ್ಜೇವಾಲಾ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ನಮ್ಮ ಸರ್ಕಾರದಲ್ಲಿ ಒಂದೇ ಡಿಸಿಎಂ ಹುದ್ದೆ ಇರಲಿದೆ, ಮುಂದಿನ ಲೋಕಸಭಾ ಚುನಾವಣೆ ನಡೆಯುವವರೆಗೂ ಡಿ.ಕೆ. ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಬೇರೆ ಸಮುದಾಯಗಳಿಂದ ನಮಗೂ ಡಿಸಿಎಂ ಪಟ್ಟ ಬೇಕು ಎನ್ನುವ ಕೂಗು ಕೇಳಿಬರುತ್ತಿದ್ದು, ರಾಜ್ಯಕ್ಕೆ ಒಬ್ಬರೇ ಡಿಸಿಎಂ ಎಂದು ನಾಯಕರು ಹೇಳಿದ್ದಾರೆ. ಸಚಿವ ಸ್ಥಾನಕ್ಕೆ ಎಲ್ಲಾ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಲಾಗುವುದು ಎಂದಿದ್ದಾರೆ.