Friday, December 19, 2025

India vs South Africa: ಲಕ್ನೋ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಲ್ ರೌಂಡರ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ–ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿ ಈಗ ತೀವ್ರ ಕುತೂಹಲದ ಹಂತ ತಲುಪಿದೆ. ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದರೆ, ಎರಡನೇ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಸಮಬಲ ಸಾಧಿಸಿತು. ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ 2–1 ಮುನ್ನಡೆ ಪಡೆದಿದೆ. ಈ ಹಿನ್ನೆಲೆ ನಾಲ್ಕನೇ ಟಿ20 ಪಂದ್ಯಕ್ಕೆ ಸಿದ್ಧತೆ ನಡೆಯುತ್ತಿರುವ ನಡುವೆ, ಭಾರತೀಯ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ.

ಡಿಸೆಂಬರ್ 17ರಂದು ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಆಲ್‌ರೌಂಡರ್ ಅಕ್ಷರ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ. ಅನಾರೋಗ್ಯದ ಕಾರಣದಿಂದ ಅಕ್ಷರ್ ಸರಣಿಯ ಉಳಿದ ಪಂದ್ಯಗಳಿಗೆ ಲಭ್ಯರಾಗುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಅವರ ಸ್ಥಾನಕ್ಕೆ ಬಂಗಾಳದ ಸ್ಪಿನ್ ಆಲ್‌ರೌಂಡರ್ ಶಹಬಾಝ್ ಅಹ್ಮದ್ ಅವರನ್ನು ಆಯ್ಕೆ ಸಮಿತಿ ತಂಡಕ್ಕೆ ಸೇರಿಸಿದೆ. ಈಗಾಗಲೇ ಶಹಬಾಝ್ ಲಕ್ನೋದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

ಶಹಬಾಝ್ ಅಹ್ಮದ್ ಇದಕ್ಕೂ ಮೊದಲು ಭಾರತ ಪರ ಎರಡು ಟಿ20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಿದ್ದು, ಐದು ವಿಕೆಟ್‌ಗಳನ್ನು ಕಬಳಿಸಿದ ಅನುಭವ ಹೊಂದಿದ್ದಾರೆ. ಜೊತೆಗೆ ದೇಶೀಯ ಹಾಗೂ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ 112ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ಅನುಭವ ಅವರ ಬೆನ್ನೆಲುಬಾಗಿದೆ. ಎರಡು ವರ್ಷಗಳ ಬಳಿಕ ಮತ್ತೆ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಶಹಬಾಝ್ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ನಾಲ್ಕನೇ ಪಂದ್ಯದಲ್ಲಿ ಅವರ ಪಾತ್ರ ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ.

error: Content is protected !!