ಹೊಸ ದಿಗಂತ ಡಿಜಿಟಲ್ ಡೆಸ್ಕ್
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಇಂದು ತಮ್ಮ 91 ನೇ ವರ್ಷದ ಹುಟ್ಟುಹಬ್ಬವನ್ನು ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರು ಸೇರಿದಂತೆ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಗೌಡರು ಹುಟ್ಟುಹಬ್ಬ ಆಚರಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಚಿವ ಹೆಚ್. ಡಿ. ರೇವಣ್ಣ ಸೇರಿದಂತೆ ಕುಟುಂಬ ಸದಸ್ಯರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಜೆಡಿಎಸ್ ಮುಖಂಡರು ಹಾಗೂ ಹಲವಾರು ಗಣ್ಯರು ದೇವೇಗೌಡರ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಹಾಗೂ ಸೋತ ಬಹುತೇಕ ಅಭ್ಯರ್ಥಿಗಳು ಗೌಡರ ನಿವಾಸಕ್ಕೆ ಆಗಮಿಸಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಪದ್ಮನಾಭನಗರದ ನಿವಾಸದ ಎದುರು ಜೆಡಿಎಸ್ ಮುಖಂಡರು ತಂದಿದ್ದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ದೇವೇಗೌಡರಿಗೆ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಬೆಂಗಳೂರು ಜೆಡಿಎಸ್ ಪಕ್ಷದ ಅಧ್ಯಕ್ಷ ರಮೇಶ್ ಗೌಡ, ಮಾಜಿ ಶಾಸಕರು ಶುಭ ಕೋರಿದರು.