ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ (23) ಮೃತ ವ್ಯಕ್ತಿ. ನಾಲ್ಕೈದು ಜನ ಯುವಕರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.