‘ಸಿದ್ದರಾಮಯ್ಯ ಎಂಬ ನಾನು’: ತೆರೆ ಮೇಲೆ ಬರುತ್ತಾ ಸಿದ್ದು ಸ್ಟೋರಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ನೂತನ ಸರಕಾರ ಅಸ್ತಿತ್ವಕ್ಕೆ ಬರಲು ಸಂಪೂರ್ಣ ಸಜ್ಜಾಗಿದ್ದು, ನಾಳೆ ಮುಖ್ಯಮಂತ್ರಿಯಾಗಿಸಿದ್ದರಾಮಯ್ಯ (Siddaramaiah) ಪದಗ್ರಹಣ ನಡೆಯಲಿದೆ.

ಇದರ ನಡುವೆ ಇತ್ತ ಮತ್ತೊಂದು ಸಿದ್ದರಾಮಯ್ಯ ಕುರಿತು ಸಿನಿಮಾ (Movie) ಘೋಷಣೆಯಾಗಿದೆ. ಸಿದ್ಧರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ (Chief Minister) ಆಯ್ಕೆಯಾಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಎಂಬ ನಾನು’ ಹೆಸರಿನಲ್ಲಿ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ನಾಗರಾಜು ಬಿ.

ಈಗಾಗಲೇ ತಮ್ಮ ಸಿನಿಮಾದ ಪೋಸ್ಟರ್ ಅನ್ನು ಕೂಡ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯನವರ ಜೀವನವನ್ನು (Biopic) ಆಧರಿಸಿ ಚಿತ್ರ ಮಾಡುವುದಾಗಿ ಸತ್ಯರತ್ನಂ ಎನ್ನುವವರು ಹೇಳಿಕೊಂಡಿದ್ದರು. ಈ ಸಿನಿಮಾದಲ್ಲಿ ‘ಲೀಡರ್ ರಾಮಯ್ಯ’ ಎಂದು ಹೆಸರಿಟ್ಟಿದ್ದರು.

ಪೋಸ್ಟರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ, ಈವರೆಗೂ ಆ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಅದು ಕೂಡ ಈವರೆಗೂ ಅಧಿಕೃತವಾಗಿಲ್ಲ. ಚುನಾವಣೆ, ನೀತಿಸಂಹಿತೆ ಕಾರಣದಿಂದಾಗಿ ಸಿನಿಮಾ ಶುರು ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಈ ಸಿನಿಮಾದ ಜೊತೆಗೆ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.

ಸಿದ್ದರಾಮಯ್ಯ ಎಂಬ ನಾನು ಚಿತ್ರತಂಡ ಹೇಳಿಕೊಂಡಂತೆ ಸದ್ಯದಲ್ಲೇ ಚಿತ್ರೀಕರಣ ಕೂಡ ಆರಂಭ ಮಾಡಲಿದ್ದಾರಂತೆ. ಆದರೆ ಈ ಕುರಿತು ಸಿದ್ಧರಾಮಯ್ಯ ಅವರ ಜೊತೆ ಮಾತುಕತೆ ಮಾಡಿದ್ದರೋ ಅಥವಾ ಅವರಿಗೆ ಗೊತ್ತಾಗದಂತೆ ಸಿನಿಮಾ ಮಾಡುತ್ತಿದ್ದರೋ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!