ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ನೂತನ ಸಿಎಂ ಪಟ್ಟಾಭಿಷೇಕ ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಏರ್‌ಪೋರ್ಟ್‌ಗೆ ರಾಗಾ ಆಗಮಿಸಿದ್ದು, ಡಿ.ಕೆ. ಶಿವಕುಮಾರ್ ಸ್ವಾಗತ ಕೋರಿದ್ದಾರೆ.
ತಾಜ್ ಹೊಟೇಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಡಿಕೆಶಿ ಏರ್‌ಪೋರ್ಟ್‌ಗೆ ಆಗಮಿಸಿದ್ದು, ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ್ದಾರೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಕಾರ್ಯಕ್ರಮ ಆರಂಭವಾಗಲಿದೆ.