ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು ನೇಮಕವಾಗಿದ್ದಾರೆ.
ಅಡ್ವೊಕೇಟ್ ಜನರಲ್ ಸ್ಥಾನಕ್ಕೆ (Advocate General) ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನೂತನ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ನನ್ನ ಮೇಲೆ ನಂಬಿಕೆ ಇಟ್ಟು ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಿರುವ ಸರ್ಕಾರಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.
ಅನಗತ್ಯ ಮತ್ತು ಕ್ಷುಲ್ಲಕ ಮೊಕದ್ದಮೆಗಳನ್ನು ಕಡಿಮೆ ಮಾಡುವ ಮೂಲಕ ಬಾಕಿ ಇರುವ ದಾವೆಗಳನ್ನು ಕಡಿಮೆ ಮಾಡುವುದು ಹಾಗೂ ಯುವ ಕಾನೂನು ಅಧಿಕಾರಿಗಳ ನೆರವಿನಿಂದ ಕಾನೂನು ಇಲಾಖೆಯನ್ನು ಬಲಪಡಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ. ಅದೇ ರೀತಿ ನ್ಯಾಯಾಲಯದ ಕಾರ್ಯನಿರ್ವಹಣೆಯನ್ನು ಉತ್ತಮಗೊಳಿಸಲು ಮೂಲಸೌಕರ್ಯ ಸುಧಾರಿಸುವುದು ಮತ್ತೊಂದು ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.