ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರವಾಸದಲ್ಲಿದ್ದಾರೆ. ಜಿ7 ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿರುವ ಮೋದಿ, ಮೊದಲ ದಿನ ಬಿಡುವಿಲ್ಲದಂತೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ನಿನ್ನೆ ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಅಂತೆಯೇ ಜಿ7 ರಾಷ್ಟ್ರಗಳ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಮೋದಿ ಭೇಟಿ ಆಯಿತು. ರಷ್ಯಾ ಮತ್ತು ಉಕ್ರೇನ್ ನಡುವೆ ಒಂದು ವರ್ಷಕ್ಕೂ ಹೆಚ್ಚು ಕಾಲ ನಡೆಯುತ್ತಿರುವ ಯುದ್ಧವನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಶ್ರಮಿಸಲಿದೆ ಎಂದು ಮೋದಿ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಎರಡನೇ ದಿನ (ಭಾನುವಾರ) ಪ್ರಧಾನಿ ಮೋದಿ ಜಪಾನ್ ಪ್ರವಾಸದ ಅಂಗವಾಗಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
78 ವರ್ಷಗಳ ಹಿಂದೆ ಹಿರೋಷಿಮಾದಲ್ಲಿ ಅಣುಬಾಂಬ್ ದಾಳಿ ನಡೆದ ಸ್ಥಳಕ್ಕೆ ಜಿ7 ರಾಷ್ಟ್ರಗಳ ನಾಯಕರೊಂದಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹಿರೋಶಿಮಾ ಶಾಂತಿ ಸ್ಮಾರಕದಲ್ಲಿ ಅಣುಬಾಂಬ್ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಆ ಬಳಿಕ ಮೋದಿ ಅವರು ಶಾಂತಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೂ ಭೇಟಿ ನೀಡಿದರು. ಅಲ್ಲಿ ದಾಖಲಿತ ಪ್ರದರ್ಶನ ಸಂದರ್ಶಕರ ಪುಸ್ತಕಕ್ಕೆ ಮೋದಿ ಸಹಿ ಹಾಕಿದರು. ಪ್ರಧಾನಿ ಮೋದಿ ಅವರೊಂದಿಗೆ ಶಾಂತಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮತ್ತು ಇತರ ನಾಯಕರು.
ಎರಡನೇ ದಿನವೂ ಹಿರೋಷಿಮಾದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿ. ಆ ಬಳಿಕ ಭಾರತ ಪೆಸಿಫಿಕ್ ದ್ವೀಪಗಳ ಸಹಕಾರ ಸಮ್ಮೇಳನದಲ್ಲಿ ಭಾಗವಹಿಸಲು ಮೋದಿ ಪಪುವಾ ನ್ಯೂಗಿನಿಯಾಗೆ ತೆರಳಲಿದ್ದಾರೆ. ಈ ವೇಳೆ ಉಕ್ರೇನ್ ಅಧ್ಯಕ್ಷ ಝಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಕ್ರೇನ್‌ಗೆ ಭೇಟಿ ನೀಡುವಂತೆ ಮನವಿ ಮಾಡಿದರು.