Wednesday, December 17, 2025

ಖಾಸಗಿ ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50ರ ತುಂಗಭದ್ರಾ ನದಿಯ ಎರಡನೇ ಸೇತುವೆ ಬಳಿ ಮಂಗಳವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಅಫ್ಜಲ್‌ಪುರದತ್ತ ಸಾಗುತ್ತಿದ್ದ ವಿಆರ್‌ಎಲ್ ಖಾಸಗಿ ಬಸ್, ಹುಲಿಗೆಮ್ಮ ದೇವಾಲಯದ ದರ್ಶನಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ.

ಬೆಳಗಿನ ಸುಮಾರು 3 ಗಂಟೆ ವೇಳೆಗೆ ನಡೆದ ಈ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಕೆಂಚಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ನಲ್ಲಿ ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಕನಿಷ್ಠ 15 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಮುನಿರಾಬಾದ್ ಹಾಗೂ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುನಿರಾಬಾದ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!