ಹೊಸದಿಗಂತ ವರದಿ ಬಾಗಲಕೋಟೆ :
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರು ಮೊದಲನೇ ಕ್ಯಾಬಿನೇಟ್ ದಲ್ಲೇ ಅನುಮೋದನೆ ನೀಡಿದ್ದು ಜೂನ್ ಮೊದಲ ವಾರದಲ್ಲೇ ಜನರಿಗೆ ಐದು ಗ್ಯಾರಂಟಿ ತಲುಪಲಿವೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ತಿಳಿಸಿದರು.
ನವನಗರದ ಪತ್ರಿಕಾಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ನೀಡಲಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಯಾವುದೇ ನೆಪವನ್ನು ಸರ್ಕಾರ ಹೇಳದೇ ಜಾರಿಗೆ ಮಾಡಿದೆ ಶೀಘ್ರದಲ್ಲೇ ಈ ಯೋಜನೆ ಜನರಿಗೆ ಮುಟ್ಟಿಸಲು ಆಯಾ ಕ್ಷೇತ್ರದ ಬ್ಲಾಕ್ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರ ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿಗಳ ಪರಿಣಾಮ ಹೆಚ್ಚಾಯಿತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದರ ಕಾರಣದಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನಿರೀಕ್ಣಿಸಿದಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದರು.