ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕರ್ನಾಟಕ ವಿಧಾನಸಭೆ ಅಧಿವೇಶನದ ಮೊದಲ ದಿನದ ಕಲಾಪಕ್ಕೂ ಮುನ್ನ ಬೆಂಗಳೂರಿನ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿ ಬಳಿಕ ವಿಧಾನಸೌಧದ ಮುಂದೆ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ್ದಾರೆ.
ಬಿಜೆಪಿ ಸರ್ಕಾರದ ಭ್ರಷ್ಟ ಹಾಗೂ ದುರಾಡಳಿತ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಶುದ್ಧೀಕರಿಸಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.
#WATCH | Bengaluru: Congress workers sprinkle cow urine and perform Pooja at the State Assembly in Bengaluru. They said that they are 'purifying' Vidhana Soudha. pic.twitter.com/SWapoH7vOL
— ANI (@ANI) May 22, 2023